CM Basavaraj Bommai Praises PM Narendra Modi In Bengaluru | Vijay Karnataka

preview_player
Показать описание
ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವ ದೇಶಕ್ಕೆ ದೊರೆತಿರುವುದು ನಮ್ಮ ಸೌಭಾಗ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ದೇಶದ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಹಗಲಿರುಳೂ ದುಡಿಯುತ್ತಿದ್ದಾರೆ ಎಂದರು.

ಪ್ರಧಾನಿ ಮೋದಿ ಅವರ ಬೆಂಗಳೂರು ಭೇಟಿಯಿಂದ ರಾಜ್ಯಕ್ಕೆ ಹಲವು ಅಭಿವೃದ್ಧಿ ಯೋಜನೆಗಳು ದೊರಕಿವೆ. ಈ ಪೈಕಿ ಹಲವು ಯೋಜನೆಗಳಿಗೆ ಸ್ವತಃ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಕರ್ನಾಟಕದ ಬಗೆಗಿನ ಪ್ರಧಾನಿ ಮೋದಿ ಅವರ ಕಾಳಜಿಗೆ ನಾನು ರಾಜ್ಯದ ಜನರ ಪರವಾಗಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ನುಡಿದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈತಪರ, ಬಡವರ ಪರ, ಯುವಕರ ಪರ ಕೆಲಸ ಮಾಡುತ್ತಿದ್ದು, ಈ ಸಮುದಾಯಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೂ ಅನೇಕ ಕೊಡುಗೆಗಳನ್ನು ನೀಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

#Bengaluru #PMNarendraModi #CMBasavarajBommai

Рекомендации по теме
Комментарии
Автор

Thank you PM Modi Ji. 💎🕉️💎🇮🇳💎 Jai Karnataka

seanbellfort